ನಂಜನಗೂಡಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಯೋಧ ನವೀನ್ ಅಂತ್ಯಕ್ರಿಯೆ

ನಂಜನಗೂಡು : ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಅಸ್ಸಾಂ ರಾಜ್ಯದ ತಿರಪೂರನಲ್ಲಿ ಹುಲ್ಲಹಳ್ಳಿ ಗ್ರಾಮದ ಯೋಧ 44 ವರ್ಷದ ವಿ‌. ನವೀನ್ ಶನಿವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಸಾವನ್ನಪ್ಪಿದ್ದರು.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ನಿವಾಸಿಯಾದ ಮೃತ ಸೈನಿಕ ವಿ. ನವೀನ್, ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮು ಎಂಬುವರರ ಪುತ್ರ ವಿ.ನವೀನ್ ಅವರು ಬಿ ಎಸ್ ಎಫ್ ಇಂಡಿಯನ್ ಸೈನ್ಯದಲ್ಲಿ ಕಳೆದ 23 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು, ಅಸ್ಸಾಂ ರಾಜ್ಯದ ತಿರಪೂರನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ .

ಯೋಧ ನವೀನ್ ರವರ ಶವವನ್ನು ಭಾನುವಾರ ರಾತ್ರಿ ಎರಡು ಗಂಟೆ ಸಮಯದಲ್ಲಿ ಹುಲ್ಲಹಳ್ಳಿ ಗ್ರಾಮಕ್ಕೂ ತರಲಾಯಿತು. ಗ್ರಾಮದ ಶ್ರೀಕಂಠ ಜೋಯಿಸ್ ವೃತ್ತದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಅನುವು ಮಾಡಲಾಯಿತು. ಶಾಸಕ ದರ್ಶನ್ ಧ್ರುವನಾರಾಯಣ್ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂಜನಗೂಡಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಕಪಿಲಾ ನದಿ ತೀರದ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು .
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಡಿವೈಎಸ್ಪಿ ರಘು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

Font Awesome Icons

Leave a Reply

Your email address will not be published. Required fields are marked *