ಛತ್ತೀಸ್ಗಢ: ಇಲ್ಲಿನ ಬಿಜಾಪುರದಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ದಾಳಿಯಲ್ಲಿ 6 ತಿಂಗಳ ಹೆಣ್ಣುಮಗು ಮೃತಪಟ್ಟಿದೆ. ಮಗುವಿನ ತಾಯಿ ಹಾಗೂ ಇಬ್ಬರು ಯೋಧರು ಗಂಭೀರವಾಗಿ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಜಾಪುರದ ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ವಂಡಿ ಗ್ರಾಮದ ಬಳಿಯ ಕಾಡಿನಲ್ಲಿ ಡಿಆರ್‌ಜಿ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ 6 ತಿಂಗಳ ಮಗುವಿಗೆ ಗುಂಡು ತಗುಲಿ, ಮಗು ಸಾವನಪ್ಪಿದೆ.
ಅಲ್ಲದೆ, ಮಗುವಿನ ತಾಯಿಯ ಕೈಗೆ ಗುಂಡು ತಗುಲಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯ ಕುಟುಂಬಕ್ಕೆ ಸಹಾಯ ಮಾಡಲು ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ಪಡೆ ಸಿಬ್ಬಂದಿ ಸ್ಥಳದಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.