ಚೆನ್ನೈ: ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ.
ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ.
ಇಎಸ್ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್ನ ಕುರ್ಚಿ, ಪ್ರೊಜೆಕ್ಟರ್ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.