ದೆಹಲಿ: ತಮಿಳು ಚಿತ್ರೋದ್ಯಮ ಖ್ಯಾತ ವಿಲನ್ ಮನ್ಸೂರ್ ಅಲಿ ಖಾನ್, ನಿಜ ಜೀವನದಲ್ಲೂ ವಿಲನ್ ಆಗಿದ್ದಾರೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ ಅವರನ್ನು ರೇಪ್ ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದರು.
ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ಆದರೂ ಮನ್ಸೂರ್ ಅಲಿ ಖಾನ್ ಮಾತ್ರ ಕ್ಷಮೆ ಕೇಳುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಮಧ್ಯ ಪ್ರವೇಶಿಸಿತ್ತು.
ದೂರು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಿತ್ತು. ಅದರಂತೆ ತಮಿಳು ನಾಡು ಪೊಲೀಸರು ನಟನ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.