ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಆಸ್ಪತ್ರೆಗೆ ದಾಖಲು

ನಟಿ ಮಹಾಲಕ್ಷ್ಮಿ ಪತಿ ನಿರ್ಮಾಕ ರವೀಂದರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಒಂದು ವಾರದಿಂದ ಟ್ರೀಟ್​ಮೆಂಟ್​ ಕೊಡಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.

ಸದ್ಯ ರವೀಂದರ್ ಯೂಟ್ಯೂಬ್​ನಲ್ಲಿ ತಮಿಳಿನ ಬಿಗ್ ಬಾಸ್ ಸೀಸನ್ ಬಗ್ಗೆ ತಮ್ಮದೇ ಶೈಲಿಯಲ್ಲಿ ವಿಮರ್ಶೆಗಳನ್ನು ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಮಾಡಿದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಕಾರಣ ಅವರು ಆಮ್ಲಜನಕದ ಮಾಸ್ಕ್​​ ಹಾಕಿ ಕಾಣಿಸಿಕೊಂಡಿದ್ದು. ಅನಾರೋಗ್ಯದ ನಡುವೆಯೂ ಅವರು ಬಿಗ್ ಬಾಸ್ ಸೀಸನ್‌ನಲ್ಲಿ ವಿಮರ್ಶೆಗಳನ್ನು ನೀಡಿದ್ದರು.

ಆರೋಗ್ಯ ಸರಿ ಇಲ್ಲದ ಕಾರಣ ರವೀಂದರ್ ಅವರು ಈ ರೀತಿ ಮಾಡಿದ್ದಾರೆ. ಇತ್ತೀಚೆಗೆ ಅವರ ಶ್ವಾಸಕೋಶಕ್ಕೆ ಸೋಂಕು ತಗುಲಿತ್ತಂತೆ. ಉಸಿರಾಡಲು ಕಷ್ಟವಾಗಿದೆ. ಒಂದು ವಾರದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವೇ ಅವರು ಚೇತರಿಸಿಕೊಳ್ಳುವ ಭರವಸೆಯಲ್ಲಿದ್ದಾರೆ.

Font Awesome Icons

Leave a Reply

Your email address will not be published. Required fields are marked *