ನಟ ದರ್ಶನ್ ಗೆ ಮಧ್ಯಂತರ ಜಾಮೀನು: ರೇಣುಕಾಸ್ವಾಮಿ ತಂದೆಯ ಪ್ರತಿಕ್ರಿಯೆ ಏನು..? » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ದಾವಣಗೆರೆ,ಅಕ್ಟೋಬರ್, 30,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಸಿಕ್ಕಿರುವ ಕುರಿತು ರೇಣುಕಾಸ್ವಾಮಿ ತಂದೆ  ಕಾಶಿನಾಥಯ್ಯ ಪ್ರತಿಕ್ರಿಯಿಸಿದ್ದಾರೆ.

ದಾವಣಗೆರೆಯಲ್ಲಿ ಈ ಕುರಿತು ಮಾತನಾಡಿರುವ  ಕಾಶಿನಾಥಯ್ಯ, ಜಾಮೀನು ಸಿಕ್ಕಿದ್ದು ಕಾನೂನು ಕ್ರಮ ಅದಕ್ಕೆ ನಮ್ಮದೇನು ಅಭ್ಯಂತರವಿಲ್ಲ. ಮಾಡಿದ ತಪ್ಪಿಗೆ ಶಿಕ್ಷೆಯಾಗಬೇಕು ಎಂಬುದು ನಮ್ಮ ಬೇಡಿಕೆ. ನಮಗೆ ಅನ್ಯಾಯವಾಗಿದೆ ಹೋರಾಟ ಮಾಡುತ್ತೇವೆ ಎಂದರು.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ.

Key words: Interim bail, actor, Darshan, reaction, Renukaswamy,  father

Font Awesome Icons

Leave a Reply

Your email address will not be published. Required fields are marked *