ನಟ ಪವನ್ ಕಲ್ಯಾಣ್ ಖಾಕಿ ವಶಕ್ಕೆ

ಅಮರಾವತಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಂದ್ರಬಾಬು ನಾಯ್ಡು ಅವರಿಗೆ ಬೆಂಬಲ ಸೂಚಿಸಲು ತೆರಳುತ್ತಿದ್ದ ಜನಸೇನಾ ಪಕ್ಷದ ಅಧ್ಯಕ್ಷ ನಟ ಪವನ್ ಕಲ್ಯಾಣ್ ಮತ್ತು ಪಕ್ಷದ ಹಿರಿಯ ನಾಯಕ ನಾದೆಂಡ್ಲ ಮನೋಹರ್ ಅವರನ್ನು ಎನ್‌ಟಿಆರ್ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಂಧ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪವನ್ ಕಲ್ಯಾಣ್ ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

‘ನಾವು ಪವನ್ ಕಲ್ಯಾಣ್ ಮತ್ತು ಮನೋಹರ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ನಾವು ಅವರನ್ನು ವಿಜಯವಾಡಕ್ಕೆ ಕರೆದೊಯ್ಯುತ್ತಿದ್ದೇವೆ’ಎಂದು ನಂದಿಗಾಮ ಉಪವಿಭಾಗದ ಪೊಲೀಸ್ ಅಧಿಕಾರಿ ಜನಾರ್ದನ್ ನಾಯ್ಡು ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *