ನಟ ಪ್ರಕಾಶ್​ ರಾಜ್​ಗೆ ಜೀವ ಬೆದರಿಕೆ ಹಾಕಿದ ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್​

ಬೆಂಗಳೂರು: ಖ್ಯಾತ ನಟ ಪ್ರಕಾಶ್​ ರಾಜ್​ ಅವರು ಹಲವು ವಿವಾದಗಳನ್ನು ಮಾಡಿಕೊಂಡಿದ್ದಾರೆ. ಅದರಿಂದ ಅವರು ಸದಾ ಕಾಲ ಚರ್ಚೆಯಲ್ಲಿ ಇರುತ್ತಾರೆ. ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಾರೆ.

ಒಂದಷ್ಟು ದಿನಗಳ ಹಿಂದೆ ಖ್ಯಾತ ಯೂಟ್ಯೂಬ್​ ವಾಹಿನಿಯಲ್ಲಿ ಪ್ರಕಾಶ್​ ರಾಜ್​ ವಿರುದ್ಧ ಜೀವ ಬೆದರಿಕೆ ಹಾಕುವಂತಹ ವಿಡಿಯೋಗಳನ್ನು ಅಪ್​ಲೋಡ್​ ಮಾಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಪ್ರಕಾಶ್​ ರಾಜ್​ ದೂರು ನೀಡಿದ್ದರು. ಈಗ ಆ ಯೂಟ್ಯೂಬ್​ ವಾಹಿನಿ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ.

ಬೆಂಗಳೂರಿನ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್‌ ಅಡಿಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ. ಪ್ರಕಾಶ್ ರಾಜ್ ಮಾತ್ರವಲ್ಲದೇ ಅವರ ಕುಟುಂಬದವರಿಗೂ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯೂಟ್ಯೂಬ್​ ವಾಹಿನಿ ವಿರುದ್ಧ ದೂರು ನೀಡಲಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *