ನನ್ನ ಪಾಲಿಗೆ ಕಾಂಗ್ರೆಸ್​ ಯಾವಾಗಲೂ ಕೆಟ್ಟ ಪಕ್ಷ ಆಗಿತ್ತು: ಕಂಗನಾ ರಣಾವತ್​

ಮುಂಬೈ: ಕಾಂಗ್ರೆಸ್​ ಪಕ್ಷದ ವಿರುದ್ಧ ಗುಡುಗಲು ನಟಿ ಕಂಗನಾ ರಣಾವತ್​ ಅವರು ಆರಂಭಿಸಿದ್ದಾರೆ. ಇಷ್ಟು ದಿನ ಬಾಲಿವುಡ್​ ಮಂದಿಯನ್ನು ಟೀಕಿಸುತ್ತಿದ್ದ ಅವರು ಈಗ ಕಾಂಗ್ರೆಸ್​  ಪಕ್ಷದವರನ್ನು ಟೀಕಿಸುತ್ತಿದ್ದಾರೆ.

ಕಾರಣ ಮಾತ್ರ ಒಂದೇ. ಅದು ನೆಪೋಟಿಸಂ! ಹೌದು, ಕಂಗನಾ ರಣಾವತ್​ ಅವರಿಗೆ ನೆಪೋಟಿಸಂ ಎಂದರೆ ಆಗುವುದಿಲ್ಲ. ಅವಕಾಶಗಳು ಕೇವಲ ವಂಶ ಪಾರಂಪರ್ಯವಾಗಿ ಸಿಗುವುದನ್ನು ಅವರು ವಿರೋಧಿಸುತ್ತಾ ಬಂದಿದ್ದಾರೆ.

ಈಗ ರಾಹುಲ್​ ಗಾಂಧಿಯನ್ನು ನೆಪೋಟಿಸಂ ಮಗು ಎಂದು ಕಂಗನಾ ಕರೆದಿದ್ದಾರೆ. ಟೈಮ್ಸ್​ ನೌ ನಡೆಸಿದ ಸಂದರ್ಶನದಲ್ಲಿ ಕಂಗನಾ ರಣಾವತ್​ ಅವರು ಈ ವಿಚಾರ ಮಾತನಾಡಿದ್ದಾರೆ.

ಸೋನಿಯಾ ಗಾಂಧಿ ಅವರ ಮಕ್ಕಳಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಬಗ್ಗೆ ಒಂದೇ ಪದದಲ್ಲಿ ವಿವರಿಸಿ ಎಂದು ಕೇಳಿದ್ದಕ್ಕೆ, ‘ನೆಪೋಟಿಸಂ ಮಕ್ಕಳು’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ. ‘ಅವರು ಮಂಗಳ ಗ್ರಹದಿಂದ ಬಂದಿದ್ದಾರೆ ಎಂಬಷ್ಟು ವಿಚಿತ್ರವಾಗಿದ್ದಾರೆ’ ಎಂದು ಅವರು ಟೀಕೆ ಮಾಡಿದ್ದಾರೆ.

‘ನನ್ನ ಪಾಲಿಗೆ ಕಾಂಗ್ರೆಸ್​ ಯಾವಾಗಲೂ ಕೆಟ್ಟ ಪಕ್ಷ ಆಗಿತ್ತು. ಆ ಪಕ್ಷದಲ್ಲಿ ಇರುವ ನೆಪೋಟಿಸಂ ನನಗೆ ಬಹಳ ತೊಂದರೆ ಎನಿಸುತ್ತಿತ್ತು. ಯಾಕೆಂದರೆ ಚಿತ್ರರಂಗದಲ್ಲಿ ನೆಪೋಟಿಸಂ ಕಾರಣದಿಂದಲೇ ನಾನು ಟಾರ್ಗೆಟ್​ ಆಗಿದ್ದೆ. ಅದನ್ನು ನಾನು ನೇರವಾಗಿಯೇ ವಿರೋಧಿಸಿದೆ. ಅದು ನನ್ನನ್ನು ಶೋಷಣೆ ಮಾಡುತ್ತಿತ್ತು. ನೆಪೋಟಿಸಂ, ಗುಂಪುಗಾರಿಕೆ, ವಂಶ ಪಾರಂಪರ್ಯ ರಾಜಕೀಯ. ಈ ಕಾರಣದಿಂದಲೇ ನಾನು ಕಾಂಗ್ರೆಸ್​ ಪಕ್ಷವನ್ನು ಇಷ್ಟಪಡುವುದಿಲ್ಲ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

Font Awesome Icons

Leave a Reply

Your email address will not be published. Required fields are marked *