ಬೆಂಗಳೂರು,ನವೆಂಬರ್,14,2024 (www.justkannada.in): ನಮ್ಮ 50 ಶಾಸಕರಿಗೆ ತಲಾ 50 ಕೋಟಿ ರೂ. ಆಮಿಷವೊಡ್ಡಿ ಸರ್ಕಾರ ಕೆಡವಲು ಬಿಜೆಪಿ ಯತ್ನಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ವಿಧಾನಸೌಧ ಆವರಣದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಐವತ್ತು ಜನ ಕಾಂಗ್ರೆಸ್ ಎಂಎಲ್ಎ ಗಳಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ. ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ” ಎಂದು ಹೇಳಿದರು.
ಸರ್ಕಾರ ಕೆಡವಲು ಪ್ರಯತ್ನ ಮಾಡುತ್ತಿದ್ದಾರೆ. ಎಲ್ಲಾ ಶಾಸಕರ ಜೊತೆ ಮಾತಾಡಿದ್ದಾರೆ. ಕೆಲ ಶಾಸಕರು ಬಂದು ನಮಗೆ ಈ ಬಗ್ಗೆ ತಿಳಿಸಿದ್ದಾರೆ. ಉಳಿದ ವಿಚಾರ ನಾನು ಅ ಮೇಲೆ ಮಾತಾಡುತ್ತೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: 50 crore, BJP, congress MLAs, DCM, DK Shivakumar