ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ- ಮಾಜಿ ಸಂಸದ ಡಿ.ಕೆ ಸುರೇಶ್ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಜೂನ್,24,2024 (www.justkannada.in): ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧೆ ಕುರಿತು ಹಬ್ಬಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿಕೆ ಸುರೇಶ್ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್, ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರ ನನ್ನ ಮುಂದೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌, ಮುಖ್ಯಮಂತ್ರಿ ಹಾಗೂ ಡಿಸಿಎಂ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಚುನಾವಣೆಗೆ ನಿಲ್ಲುವುದು ಇದೆಲ್ಲವೂ ಮಾಧ್ಯಮಗಳ ಊಹಾಪೋಹವಷ್ಟೇ. ಚುನಾವಣೆ ಸೋಲಿನಿಂದ ನಾನು ಒತ್ತಡದಲ್ಲಿದ್ದೆ, ಸದ್ಯ ಅದರಿಂದ ಹೊರಗಡೆ ಬಂದಿದ್ದೇನೆ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್,  ಡಿಕೆ ಶಿವಕುಮಾರ ಸ್ಪರ್ಧಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಡಿಕೆ ಶಿವಕುಮಾರ್ ಅವರು ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನಹರಿಸಿದ್ದಾರೆ ಎಂದಿದ್ದಾರೆ. ಸೂಕ್ತ ಅಭ್ಯರ್ಥಿಯನ್ನ ನಮ್ಮ ಪಕ್ಷ ಕಣಕ್ಕಿಳಿಸುತ್ತದೆ ಎಂದರು.

Key words:   contest, any election,Former MP,  DK Suresh

Font Awesome Icons

Leave a Reply

Your email address will not be published. Required fields are marked *