ಚನ್ನಪಟ್ಟಣ, ನ..06,2024 : (www.justkannada.in news) ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜಂಟಿಯಾಗಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತಯಾಚನೆ ನಡೆಸಿದರು.
ಈ ಇಬ್ಬರೂ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧಅಸಮಧಾನ ವ್ಯಕ್ತಪಡಿಸಿ ಸರ್ಕಾರದ ವೈಫಲ್ಯ ಎತ್ತಿಹಿಡಿದರು. ರಾಜ್ಯ ಖಜಾನೆ ಖಾಲಿ ಆಗಿದೆ, ರಾಜ್ಯ ದಿವಾಳಿ ಆಗಿದೆ. ಅಭಿವೃದ್ದಿ ಕೆಲಸಗಳಿಗೆ ಹಣ ಇಲ್ಲ. ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಿದರು.
ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ; ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ದೊಡ್ಡ ಪ್ರಮಾಣದ ಮತಗಳ ಅಂತರದಿಂದ ಗೆಲ್ಲುತ್ತಾರೆ. ಅದರಲ್ಲಿ ನನಗೆ ಯಾವುದೇ ಸಂಶಯ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
2006ರಲ್ಲಿ ನಾನು ಮತ್ತು ಕುಮಾರಸ್ವಾಮಿ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದ್ದೆವು. ಅತ್ಯುತ್ತಮ ಆಡಳಿತ ನೀಡಿದ್ದೆವು. ಭಾಗ್ಯಲಕ್ಷ್ಮಿ, ಉಚಿತ ಬೈಸಿಕಲ್, ಸಂಧ್ಯಾ ಸುರಕ್ಷಾ ಸೇರಿದಂತೆ ಅನೇಕ ಜನಪರ ಯೋಜನೆಯನ್ನು ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದೆವು. ಇದೆಲ್ಲವನ್ನು ಜನತೆ ಮರೆಯಬಾರದು ಇಂದು ಅವರು ಮನವಿ ಮಾಡಿದರು.
key words: h.d.devegowda ,b.s.yadiyurappa, joint campaign, at channapatna