ಮೈಸೂರು,ನವೆಂಬರ್,25,2024 (www.justkannada.in): ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡರು, ಯೋಗೇಶ್ವರ್ ನಿಖಿಲ್ ಯಾರಿಗೆ ಟಿಕೆಟ್ ಕೊಡಿ. ಆದರೆ ಯೋಗೇಶ್ವರ್ ನ ಜೊತೆ ಇಟ್ಟುಕೊಳ್ಳಿ ಎಂದಿದ್ದೆ. ನನ್ನ ಮಾತನ್ನು ಕುಮಾರಸ್ವಾಮಿ ಕೇಳಲಿಲ್ಲ ಎಂದರು.
ಇಂದು ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ.ಜಿ.ಟಿ ದೇವೇಗೌಡ, ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಕುರಿತು ಕ್ಷೇತ್ರದ ಜನ ನಿರ್ಧಾರ ಮಾಡ್ತಾರೆ. ಕಳೆದ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದಿಂದ ಆಫರ್ ಬಂದಿತ್ತು ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್ ಮಂತ್ರಿ ಮಾಡುವುದಾಗಿ ಹೇಳಿದ್ದರು. ಖುದ್ದು ರಾಹುಲ್ ಗಾಂಧಿ ಮನೆಗೆ ಬರಲು ತಯಾರಿ ಮಾಡಿಕೊಂಡಿದ್ದರು. ಆದರೆ ತಂದೆ ಸ್ಥಾನದಲ್ಲಿರುವ ದೇವೇಗೌಡರ ಮಾತಿಗೆ ಮಣಿದು ಪಕ್ಷದಲ್ಲಿಯೇ ಉಳಿದೆ. ಮುಂದಿನ ಮೂರು ವರ್ಷ ಜೆಡಿಎಸ್ ಪಕ್ಷದಲ್ಲಿ ಇರ್ತೀನಿ. ಮುಂದೆ ಕಾಂಗ್ರೆಸ್ ಸೇರಬೇಕೋ ಬೇಡವೋ ಜನ ತೀರ್ಮಾನ ಮಾಡ್ತಾರೆ ಎಂದರು.
ಚನ್ನಪಟ್ಟಣದಲ್ಲಿ ನಿಖಿಲ್ ಸೋಲು ವಿಚಾರ ಕುರಿತು ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡರು, ನನ್ನ ಮಾತು ಕುಮಾರಸ್ವಾಮಿ ಕೇಳಲಿಲ್ಲ. ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ನನ್ನ ಮಾತನ್ನ ಗಣನೆಗೆ ತೆಗೆದುಕೊಳ್ಳಲಿಲ್ಲ ಸಿ.ಪಿ.ಯೋಗೇಶ್ವರ್ ಅವರನ್ನ ಒಗ್ಗೂಡಿಸಿದ್ದು ನಾನು. ಕೊನೆಗೆ ಅವರೇ ಸಂಸತ್ ಚುನಾವಣೆಯಲ್ಲಿ ಒಂದಾಗಿದ್ದರು. ಬಳಿಕ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ಗೊಂದಲಕ್ಕೆ ಒಳಗಾದರು. ಮೂರು ಬಾರಿ ಅವರೇ ಚನ್ನಪಟ್ಟಣದ ನಮ್ಮ ಅಭ್ಯರ್ಥಿ ಸೋಲ್ತಾನೆ ಅಂತ ಹೇಳಿದ್ರು. ಅದೇ ವಿಚಾರಕ್ಕೆ ನನಗೂ ಅವರಿಗೂ ಮನಸ್ತಾಪ ಉಂಟಾಯಿತು. ನನ್ನ ಮೇಲೆ ಕುಮಾರಸ್ವಾಮಿ ಮುನಿಸಿಕೊಂಡರು ಎಂದು ತಿಳಿಸಿದರು.
ಚನ್ನಪಟ್ಟಣ ಸೋಲುವ ಕ್ಷೇತ್ರವಲ್ಲ. ನನಗೆ ಕುಮಾರಸ್ವಾಮಿ ಮೇಲೆ ಮುನಿಸಿರುವುದು ಸತ್ಯ. ಸಾ.ರಾ ಮಹೇಶ್ ವಿಚಾರದಲ್ಲಿ ಬೇಸರವಿದೆ. ಸಿದ್ದರಾಮಯ್ಯ ಗೆ ಜಿಟಿಡಿ ಬಗ್ಗೆ ಗೊತ್ತು. ನೇರವಾಗಿ ಸತ್ಯ ಹೇಳುತ್ತೇನೆ ಅಂತ ಗೊತ್ತು. ಈವರೆಗೆ ಯಾವುದೇ ಸಣ್ಣ ಕೆಲಸಕ್ಕೂ ಸಿದ್ದರಾಮಯ್ಯ, ಡಿಕೆಶಿ ಬಳಿ ಹೋಗಿಲ್ಲ. ಆದರೆ ಇನ್ಮುಂದೆ ಹೋಗುತ್ತೇನೆ ಎಂದು ಜಿ.ಟಿ ದೇವೇಗೌಡ ತಿಳಿಸಿದರು.
ಮುಡಾದಲ್ಲಿ ತಮ್ಮ ಅಕ್ಕನ ಮಗನ ಸೈಟು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡ, ನನಗೆ ನಾಲ್ಕೈದು ಜನ ಅಕ್ಕ ತಂಗಿಯರು ಇದ್ದಾರೆ. ಯಾರು ಯಾರು ಏನು ಮಾಡ್ತಿದ್ದಾರೆ ಗೊತ್ತಿಲ್ಲ. ಮಹೇಂದ್ರ ಮನೆಗೆ ಕೊಟ್ಟಿರುವ ಸೈಟು ಬಗ್ಗೆ ಕೇಳಿದ್ದೇನೆ. ಅದು ಅಕ್ರಮವಾಗಿಲ್ಲ. ಪಿತ್ರಾರ್ಜಿತಾ ಆಸ್ತಿ. ಮುಡಾದವರು ಜಮೀನು ಬದಲು ಸೈಟು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಪತ್ನಿ ಪ್ರಕರಣಕ್ಕೂ ನಮ್ಮ ಅಕ್ಕನ ಮಗನ ಪ್ರಕರಣ ಬೇರೆ ಬೇರೆ. ಒಂದು ವೇಳೆ ಅಕ್ರಮ ಆಗಿದ್ದರೆ ಕ್ರಮ ತೆಗೆದುಕೊಳ್ಳಲಿ. ಸೈಟ್ ಗಳನ್ನ ಮುಟ್ಟುಗೋಲು ಹಾಕಿಕೊಳ್ಳಲಿ ಎಂದರು.
Key words: Nikhil, Defeat, MLA, G.T. Deve Gowda, HD Kumaraswamy