ನ. 20ರ ಮದ್ಯ ಮಾರಾಟ ಬಂದ್ ಗೆ ನಮ್ಮ ಬೆಂಬಲ ಇಲ್ಲ- ಚಂದ್ರಶೇಖರ್ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮೈಸೂರು,ನವೆಂಬರ್,15,2024 (www.justkannada.in):  ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ನವೆಂಬರ್ 20ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್ ನಮ್ಮ ಬೆಂಬಲ  ಇಲ್ಲ ಎಂದು ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ  ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿಯಿಂದ ಇಂದು ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಯಿತು.

ಈ ವೇಳೆ ಮಾತನಾಡಿದ ಚಂದ್ರಶೇಖರ್,  ನವೆಂಬರ್ 20ರಂದು ಮದ್ಯ ಮಾರಾಟ ಬಂದ್ ಗೆ ನಮ್ಮ ಬೆಂಬಲ ಇಲ್ಲ. ನಾವು ಎಂದಿನಂತೆ ನಮ್ಮ ವ್ಯಾಪಾರ ವಹಿವಾಟು ಮಾಡುತ್ತೇವೆ. ಅಬಕಾರಿ ಇಲಾಖೆಯಲ್ಲಿ ಯಾವುದೇ ಲಂಚ ನೀಡಿದ್ರೆ ಅದಕ್ಕೆ ದಾಖಲೆ ನೀಡಲಿ. ನವೆಂಬರ್ 20 ರ ಮದ್ಯ ಮಾರಾಟ ಬಂದ್ ಗೆ ನಮ್ಮ ವಿರೋಧ ಇದೆ ಎಂದರು.

ನಮ್ಮ ಅಂಗಡಿಗಳನ್ನ ಬಲವಂತವಾಗಿ ಬಂದ್ ಮಾಡಿಸಲು ಮುಂದಾದ್ರೆ ನಾವು ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಚಂದ್ರಶೇಖರ್ ಎಚ್ಚರಿಕೆ ನೀಡಿದರು.

Key words: not support, liquor sale, bandh, mysore, Chandrasekhar

Font Awesome Icons

Leave a Reply

Your email address will not be published. Required fields are marked *