ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರದಲ್ಲಿ ಗೃಹಿಣಿಯೊಬ್ಬರಯ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮೃತ ಗೃಹಿಣಿಯನ್ನು ಕಾವ್ಯ ಎಂದು ಗುರುತಿಸಲಾಗಿದೆ.
ಮಗಳು ನೇಣಿಗೆ ಶರಣಾಗಲು ಪತಿಯ ಅಕ್ರಮ ಸಂಬಂಧವೇ ಕಾರಣ ಎಂದು ಕಾವ್ಯ ಪೋಷಕರು ಆರೋಪಿಸಿದ್ದಾರೆ. ಪತಿ ಪ್ರವೀಣ್ ಸೇರಿ ನಾಲ್ವರ ವಿರುದ್ಧ ಕಾವ್ಯ ಪೋಷಕರು ದೂರು ನೀಡಿದ್ದಾರೆ.
ಎರಡು ವರ್ಷದ ಹಿಂದೆ ಅರ್ಧಕೆಜಿ ಚಿನ್ನಕೊಟ್ಟು, 50 ಲಕ್ಷ ಖರ್ಚು ಮಾಡಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದೆವು. ಕಾವ್ಯಳ ಪತಿ ಪ್ರವೀಣ್, ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದ. ಆದರೆ ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಆದರೆ ಅಳಿಯನ ಜೊತೆ ಹುಡುಗಿಯೊಬ್ಬಳ ಅಕ್ರಮ ಸಂಬಂಧವಿತ್ತು. ಈ ಬಗ್ಗೆ ಪ್ರಶ್ನೆ ಮಾಡಿದರೆ ತಂಗಿ ಎಂದು ಹೇಳಿದ್ದ ಎಂದು ಕಾವ್ಯ ಪೋಷಕರು ಆರೋಪಿಸಿದ್ದಾರೆ.
ಮೃತ ಕಾವ್ಯಳ ಪತಿ, ಅತ್ತೆ, ಮಾವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಜೀಪ್ ಹತ್ತುತ್ತಿದ್ದ ವೇಳೆ, ಕಾವ್ಯಳ ಪತಿ, ಅತ್ತೆ, ಮಾವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821