ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ಬಿಗ್ಬಾಸ್ ಒಟಿಟಿ ಸೀಸನ್-1ರ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ11 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್ ನಿಂದ ಜಾಮೀನು ಮಂಜೂರಾಗಿತ್ತು. ಜಾಮೀನು ಅರ್ಜಿಯ ಷರತ್ತುಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಜೈಲಿನಿಂದ ರಿಲೀಸ್ ಮಾಡಲಾಗಿದೆ.
ಮೂರು ದಿನಗಳ ಹಿಂದೆ ಸೋನುಗೌಡಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇಬ್ಬರ ಶ್ಯೂರಿಟಿ ಜತೆಗೆ 1 ಲಕ್ಷ ಬಾಂಡ್ ಷರತ್ತು ವಿಧಿಸಲಾಗಿತ್ತು. ಇದೀಗ ಜಾಮೀನು ಅರ್ಜಿಯ ಷರತ್ತುಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8.10ರ ಸುಮಾರಿಗೆ ಸೋನುಗೌಡ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.