ಪರಶುರಾಮ ಥೀಮ್‌ ಪಾರ್ಕ್‌ ಹಗರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ

ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
Photo Credit :
News Kannada

ಉಡುಪಿ: ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿತ್ತು. ಅಲ್ಲದೇ ಸ್ವತಃ ಜಿಲ್ಲೆಯ ಕಾಂಗ್ರೆಸ್​ ಕಾರ್ಯಕರ್ತರು ಈ ಪ್ರಕರಣದ ತನಿಖೆ ಪ್ರಾರಂಭವಾಗುವವರೆಗೂ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಸಿಐಡಿಗೆ ವಹಿಸಿದ್ದಾರೆ.

ಹನಿ ಹನಿ ಕೂಡಿ ಹಳ್ಳ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

This site is protected by reCAPTCHA and the Google
Privacy Policy and
Terms of Service apply.

44

News Kannada

The most exciting, trusted and preferred news websites of Karnataka and Kannadigas around the world.

Read More Articles

Font Awesome Icons

Leave a Reply

Your email address will not be published. Required fields are marked *