ಪಾಕಿಸ್ತಾನ: ಭಾರತದ ಮೋಸ್ಟ್ ವೆಂಟೆಡ್ ಉಗ್ರ ಶೇಖ್ ಜಮೀಲ್-ಉರ್-ರೆಹಮಾನ್ ಪಾಕಿಸ್ತಾನದಲ್ಲಿ ನಿಗೂಢವಾಗಿ ಕೊಲೆಯಾಗಿದ್ದಾನೆ ಎಂದು ವರದಿಯಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಕಮಾಂಡರ್ ಖೈಬರ್ ಪಖ್ತುಂಖ್ವಾದ ಅಬೋಟಾಬಾದ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಯುನೈಟೆಡ್ ಜಿಹಾದ್ ಕೌನ್ಸಿಲ್ (UJC) ನ ಸ್ವಯಂ-ಘೋಷಿತ ಪ್ರಧಾನ ಕಾರ್ಯದರ್ಶಿ ರೆಹಮಾನ್ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಗೆ ಸೇರಿದವನು.
ಶೇಖ್ ಜಮೀಲ್-ಉರ್-ರೆಹಮಾನ್ ಮೂಲತಃ ಪುಲ್ವಾಮಾದವನು, ಆದರೆ ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳನ್ನು ಸಂಘಟಿಸಿದ ನಂತರ ಪಾಕಿಸ್ತಾನಕ್ಕೆ ಸ್ಥಳಾಂತರಗೊಂಡಿದ್ದ. ಅಕ್ಟೋಬರ್ 2022 ರಲ್ಲಿ ಭಾರತ ಸರ್ಕಾರದಿಂದ ಭಯೋತ್ಪಾದಕ ಎಂದು ಗೊತ್ತುಪಡಿಸಿದ ರೆಹಮಾನ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಯೊಂದಿಗೆ ನಿಕಟ ಸಂಬಂಧ ಹೊಂದಿದ್ದ ಎನ್ನಲಾಗಿದೆ.