ಪಾಕಿಸ್ತಾನದ ಪ್ರಧಾನಿ ಹುದ್ದೆಗೆ ಶೆಹಬಾಜ್ ಷರೀಫ್ ನಾಮನಿರ್ದೇಶನ

ಪಾಕಿಸ್ತಾನ: ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರನ್ನು ಮಂಗಳವಾರ ರಾತ್ರಿ ಪಾಕಿಸ್ತಾನದ ಪ್ರಧಾನಿ ಹುದ್ದೆಗೆ ಅವರ ಪಕ್ಷವು ನಾಮನಿರ್ದೇಶನ ಮಾಡಿದೆ.

ಪಕ್ಷದ ವರಿಷ್ಠ ನವಾಜ್ ಷರೀಫ್ (74) ಅವರು ತಮ್ಮ ಕಿರಿಯ ಸಹೋದರ ಶೆಹಬಾಜ್ ಷರೀಫ್ (72) ಅವರನ್ನು ಪ್ರಧಾನಿ ಹುದ್ದೆಗೆ ಮತ್ತು ಪುತ್ರಿ ಮರ್ಯಮ್ ನವಾಜ್ (50) ಅವರನ್ನು ಪಂಜಾಬ್ ಮುಖ್ಯಮಂತ್ರಿ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪಿಎಂಎಲ್-ಎನ್ ವಕ್ತಾರ ಮರ್ಯಮ್ ಔರಂಗಜೇಬ್ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ನವಾಜ್ ಷರೀಫ್ ಅವರು ಪಿಎಂಎಲ್-ಎನ್ (ಮುಂದಿನ ಸರ್ಕಾರ ರಚಿಸಲು) ಬೆಂಬಲಿಸುವ ರಾಜಕೀಯ ಪಕ್ಷಗಳಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಅಂತಹ ನಿರ್ಧಾರಗಳು ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರಲಿದೆ ಎನ್ನುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

ಪ್ರಧಾನಿ ಹುದ್ದೆಯ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ , ತಮ್ಮ ಪಕ್ಷವು ಸರ್ಕಾರದ ಭಾಗವಾಗದೆ ಪ್ರಧಾನಿ ಹುದ್ದೆಗೆ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಹೇಳಿದರು.

ಶಹಬಾಜ್ ಷರೀಫ್ ಪರಿಚಯ ಶಹಬಾಜ್ ಷರೀಫ್ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ. ಅವರು ಆಗಸ್ಟ್ 2018 ರಿಂದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ಎನ್ (ಪಿಎಂಎಲ್-ಎನ್) ಅಧ್ಯಕ್ಷರು. ಈ ಹಿಂದೆ ಪಂಜಾಬ್‌ನ ಮುಖ್ಯಮಂತ್ರಿಯಾಗಿ ಮೂರು ಬಾರಿ ಸೇವೆ ಸಲ್ಲಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *