ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿಯಾಗಿ 2ನೇ ಅವಧಿಗೆ ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.
ಕಳೆದ ತಿಂಗಳು ನಡೆದ ವಿವಾದಾತ್ಮಕ ಚುನಾವಣೆಯ ನಂತರ ಪಾಕಿಸ್ತಾನದ ಶಾಸಕರು ಶೆಹಬಾಜ್ ಷರೀಫ್ ಅವರನ್ನು ಎರಡನೇ ಅವಧಿಗೆ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ.
ಇಂದು ಸಂಸತ್ತಿನ ಕೆಳಮನೆ ಎಂದು ಕರೆಯಲ್ಪಡುವ ರಾಷ್ಟ್ರೀಯ ಅಸೆಂಬ್ಲಿಯು ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲು ಸಭೆ ಸೇರಿತು. ಈ ವೇಳೆ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶೆಹಬಾಜ್ 201 ಮತಗಳನ್ನು ಪಡೆದರು. ಅವರ ಪ್ರತಿಸ್ಪರ್ಧಿ ಒಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಪಡೆದರು.