ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಮಂಗಳೂರು:  ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ನಡೆಸಲಾಯಿತು.ಕ್ರೀಡಾಕೂಟವನ್ನು ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್  ಮತ್ತು ಪವರ್ ಲಿಫ್ಟರ್ ಶ್ರೀ ವಿನೋದ್ ಕುಮಾರ್ ರವರು ಉದ್ಘಾಟಿಸಿದರು.

ತದನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಕ್ರೀಡೆಯ ಮಹತ್ವ ವನ್ನು ಸವಿಸ್ತಾರವಾಗಿ ವಿವರಿಸಿದರು, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಮತ್ತು ಇಂದಿನ ಯುವಪೀಳಿಗೆಯು ಕ್ರೀಡೆಯಲ್ಲಿ ಆಸಕ್ತಿ ಕಳೆದುಕೊಳ್ಳುತ್ತಿರುವುದು ದುರದೃಷ್ಟಕರ , ವಿದ್ಯಾರ್ಥಿಗಳಾದ ತಾವು ಕ್ರೀಡಾಕ್ಷೇತ್ರದಲ್ಲಿ ತಮ್ಮನ್ನು ತಾವು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ನುಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವಹಿಸಿದ್ದ ಕಾಲೇಜಿನ  ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಶಿಂ ಅವರು ವಿವಿಧ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡು ಆ ಮೂಲಕ ತಮ್ಮಲ್ಲಿರುವ ಪ್ರತಿಭೆಗಳನ್ನು  ಹೊರತರಬೇಕು ಎಂದು ಶುಭಹಾರೈಸಿದರು.

Pa

ವೇದಿಕೆಯಲ್ಲಿ  ಪಿ.ಎ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ಹರಿಕೃಷ್ಣನ್ ಜಿ ,ಪಿ.ಎ ಫಿಸಿಯೋತೆರಫಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಜೇಶ್ ರಘುನಾಥನ್,ಪಿ.ಎ ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊಫೆಸರ್ ಇಸ್ಮಾಯಿಲ್ ಖಾನ್,ಪಿ.ಎ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥರಾದ ಡಾ.ಸಯ್ಯದ್ ಅಮೀನ್, ಶ್ರೀ ಮಹಮ್ಮದ್ ಫೈಝಲ್,ಕ್ಯಾಂಪಸ್ ಸೂಪರ್  ವೈಸರ್ ಕ್ಯಾಪ್ಟನ್ ರುದ್ರೇಶ್ ಉಪಸ್ಥಿತಿದ್ದರು. ವಿದ್ಯಾರ್ಥಿಗಳ ಪಥಸಂಚಲನ ಕಣ್ಮನ ಸೆಳೆಯಿತು. ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ಸಂಯೋಜನೆಯನ್ನು  ದೈಹಿಕ ನಿರ್ದೇಶಕರುಗಳಾದ ಶ್ರೀ ಇಬ್ರಾಹಿಂ,ಡಾ.ಮಹಮ್ಮದ್ ಇಕ್ಬಾಲ್, ಸಂಯೋಜಿಸಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು  ಉಪಸ್ಥಿತಿಯ ಮೂಲಕ ವಾರ್ಷಿಕ ಕ್ರೀಡಾಕೂಟ ಯಶಸ್ವಿಯಾಗಿ ನೆರವೇರಿತು.ಕಾರ್ಯಕ್ರಮದ ಸ್ವಾಗತವನ್ನು  ವಿದ್ಯಾರ್ಥಿಗಳಾದ ಲಿಯಾ ತನಾಸ್, ವಂದನಾರ್ಪಣೆಯನ್ನು ಹಿಯಾ ಅಶುಖ್, ಹಾಗೂ  ಕಾರ್ಯಕ್ರಮದ ನಿರೂಪಣೆಯನ್ನು ಮಹಮ್ಮದ್ ಸಫ್ವಾನ್ ನಿರೂಪಿಸಿದರು.

Font Awesome Icons

Leave a Reply

Your email address will not be published. Required fields are marked *