ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್, ಸ್ಕೂಟರ್ ಅಪಘಾತ

ಪುತ್ತೂರು: ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ನಡೆದಿದೆ.

ಪುತ್ತೂರು – ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌ ಮತ್ತು ಕೇಪುಳು ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಸ್ಕೂಟರ್ ನಲ್ಲಿದ್ದ ಸವಾರ ಮತ್ತು ಹಿಂಬದಿ ಸವಾರೆ ಹಾಗು ಬೈಕ್‌ ಸವಾರನಿಗೆ ಗಾಯವಾಗಿದೆ.

ಸ್ಕೂಟರ್ ಹಿಂಬದಿ ಸವಾರೆ ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿ ಮಾಹಿತಿ ಪಡೆದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Font Awesome Icons

Leave a Reply

Your email address will not be published. Required fields are marked *