ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಲಾಯಿತು.

ಪ್ರಜ್ವಲ ರೇವಣ್ಣನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯ ಅಂಬೇಡ್ಕ‌ರ್ ವೃತ್ತದಲ್ಲಿ ಯುಥ್ ಕಾಂಗ್ರೆಸ್ ವತಿಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.

ʼಬೇಟಿ ಬಚಾವೋ ಎಂದವರು ಎಲ್ಲಿ ಇದ್ದಾರೆ? ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟ ಯಾವಾಗ? ಮೈತ್ರಿಗೋಸ್ಕರವಾಗಿ ಬಿಜೆಪಿ-ಜೆಡಿಎಸ್ ಮಾತನಾಡುತ್ತಿಲ್ಲ. ಈ ಕುರಿತು ನಾವು ಪ್ರಧಾನಿ ಮೋದಿ, ಅಮಿತ್ ಶಾ, ಜೋಶಿಯವರಿಗೆ ಪ್ರಶ್ನೆ ಮಾಡುತ್ತೇವೆ. ಮಹಿಳಾ ವರ್ಗಕ್ಕೆ ರಕ್ಷಣೆ ಕೊಡುವಂತಹ ಕೆಲಸವಾಗಬೇಕಿದೆʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Font Awesome Icons

Leave a Reply

Your email address will not be published. Required fields are marked *