ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಇಂದು ಬಿಡುಗಡೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತು ಇಂದು ಬಿಡುಗಡೆಯಾಗಲಿದೆ. ದೇಶಾದ್ಯಂತ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ. PM-KISANನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, 18ನೇ ಕಂತಿನ ರೈತರ ಕಾಯುವಿಕೆ ಕೊನೆಗೊಳ್ಳಲಿದೆ.

ಪಿಎಂ-ಕಿಸಾನ್ ಯೋಜನೆಯಡಿ ಪ್ರತಿ ವರ್ಷ ಅರ್ಹ ರೈತರಿಗೆ 6,000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಮೂರು ಕಂತುಗಳಲ್ಲಿ ತಲಾ 2,000 ರೂಪಾಯಿ ಹಾಕಲಾಗುತ್ತದೆ. ರೈತರಿಗೆ ಆರ್ಥಿಕವಾಗಿ ಸಹಾಯ, ಕೃಷಿಗೆ ತಗಲುವ ವೆಚ್ಚದಿಂದ ಪರಿಹಾರ ನೀಡುವುದು ಯೋಜನೆಯ ಉದ್ದೇಶ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗಳಿಗೆ ಕಳುಹಿಸಲಾಗುತ್ತದೆ.

ಈ ಯೋಜನೆಯ ಪ್ರಯೋಜನ ಪಡೆಯಲು ರೈತರು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಯಾವುದೇ ರೈತರು ಇನ್ನೂ ಇ-ಕೆವೈಸಿ ಮಾಡದಿದ್ದರೆ, ಅವರು ಈ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಬೇಕು. ರೈತರು ತಮ್ಮ ಮೊಬೈಲ್ ಫೋನ್‌ನಿಂದ OTP ಮೂಲಕ ಇ-ಕೆವೈಸಿ ಮಾಡಬಹುದು ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (ಸಿಎಸ್‌ಸಿ) ಭೇಟಿ ನೀಡುವ ಮೂಲಕ ಬಯೋಮೆಟ್ರಿಕ್ ಇ-ಕೆವೈಸಿ ಪಡೆಯಬಹುದು. ಇ-ಕೆವೈಸಿ ಇಲ್ಲದೆ ರೈತರು ಈ ಯೋಜನೆಯ ಮುಂಬರುವ ಕಂತಿನ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ.

Font Awesome Icons

Leave a Reply

Your email address will not be published. Required fields are marked *