ಚಿತ್ರದುರ್ಗ: ಲೋಕಸಬಾ ಚುನಾವಣಾ ಹಿನ್ನಲೆ ಭರ್ಜರಿಯಾಗಿ ಪ್ರಚಾರ ನಡೆಯುತ್ತಿದ್ದು, ಪ್ರಿಯಾಂಕಾ ಗಾಂಧಿ ಕರ್ನಾಟಕಕ್ಕೆ ಬಂದಿದ್ದು, ಚಿತ್ರದುರ್ಗ ಸಮಾವೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಈ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಸಂವಿಧಾನ ತಿದ್ದುಪಡಿ ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಎಸ್ಸಿ, ಎಸ್ಟಿಗೆ ವಿಶೇಷ ಅನುದಾನವನ್ನು ನೀಡುತ್ತೇವೆ. ಇಡೀ ದೇಶದಲ್ಲಿ ಜಾತಿ ಗಣತಿಯನ್ನ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಕಾಡುಗೊಲ್ಲ ಸಮಾಜವನ್ನು ಎಸ್ಟಿಗೆ ಸೇರಿಸಲಾಗುತ್ತದೆ. ರೈತರಿಗೆ ಬೆಂಬಲ ಬೆಲೆ, ಕೃಷಿಗೆ GST ಮುಕ್ತಗೊಳಿಸ್ತೇವೆ. ಭೂಮಿ ಇಲ್ಲದವರಿಗೆ ಭೂಮಿ ನೀಡುತ್ತೇವೆ. ಬೆಳೆ ನಷ್ಟವಾದವರಿಗೆ 30 ದಿನದಲ್ಲಿ ವಿಮೆ ಹಣ ಕೊಡುತ್ತೇವೆ. ದೇಶದ ಸಂವಿಧಾನ, ರೈತರ ಉಳುವಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಹೇಳಿದ್ದಾರೆ.