ಬಜರಂಗದಳ ಸಂಚಾಲಕ ಭರತ್ ಕುಮಾರ್ ಗಡಿಪಾರು ಹಿನ್ನೆಲೆ ಜಿಲ್ಲಾಧ್ಯಕ್ಷ ತೀವ್ರ ಖಂಡನೆ

 ಮಂಗಳೂರು   : ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿರುವುದನ್ನು ವಿಶ್ವ ಹಿಂದೂ ಪರಿಷದು -ಬಜರಂಗ ದಳ ತೀವ್ರವಾಗಿ ಖಂಡಿಸಿದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕೇವಲ ಹಿಂದೂ ಕಾರ್ಯಕರ್ತರನ್ನು ಮಾತ್ರ ಗುರಿಯಾಗಿರಿಸಿಕೊಂಡು ಅವರನ್ನು ಗಡಿಪಾರು ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದೆ.

ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಕೂಡಾ ಗುರಿಯಾಗಿರಿಸಿಕೊಂಡು ಅವರಿಗೆ ನೋಟೀಸ್ ಹೊರಡಿಸಲಾಗಿದೆ. ರಾಜ್ಯ ಸರಕಾರ ಅವರನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಲು ಸಂಚು ಹೂಡಿದೆ ಎಂದು ವಿಶ್ವ ಹಿಂದೂ ಪರಿಷದ್‌ನ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲಲ್ಲಿ ಬಾಂಬ್‌ಗಳನ್ನಿಟ್ಟು ಸ್ಫೋಟಿಸುವ ಭಯೋತ್ಪಾದಕರನ್ನು `ಬ್ರದರ‍್ಸ್’ ಎಂದು ಕರೆದುಕೊಳ್ಳುವ ಮನಃಸ್ಥಿತಿಯ ಕಾಂಗ್ರೆಸ್ ನಾಯಕರು ದೇಶಭಕ್ತ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗಡಿಪಾರು ಮಾಡುವಂತಹ ಕೆಲಸಕ್ಕೆ ಕೈ ಹಾಕಿದ್ದಾರೆ. ರಾಜ್ಯ ಸರಕಾರದ ಇಂತಹ ಹಿಂದೂ ವಿರೋಧಿ ಧೋರಣೆಯನ್ನು ವಿಶ್ವ ಹಿಂದೂ ಪರಿಷದ್-ಬಜರಂಗ ದಳ ಉಗ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲದೆ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಸಮಸ್ತ ಹಿಂದೂಗಳು ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠವನ್ನು ಕಲಿಸಲಿದ್ದಾರೆ. ಹಿಂದೂಗಳನ್ನೇ ಗುರಿಯಾಗಿರಿಸಿ ಗಡಿಪಾರು ಮಾಡುವಂತಹ ಸರಕಾರದ ಹೀನ ಮನಃಸ್ಥಿತಿ ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *