ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ದೊಡ್ಡ ಅಸ್ಥಿರತೆಯ ನಂತರ ಅಸ್ತಿತ್ವಕ್ಕೆ ಬಂದಿರುವ ಮಧ್ಯಂತರ ಸರ್ಕಾರ ಅಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಕೆಲವು ಕಠಿಣ ನಿರ್ಧಾರಗಳನ್ನು ಕೈಗೊಂಡಿದೆ. ಇದೀಗ ಬಾಂಗ್ಲಾದೇಶದಲ್ಲಿನ ಕಾನೂನು ಸುವ್ಯವಸ್ಥೆಯನ್ನು ತಹಬದಿಗೆ ತರಲು ಮತ್ತು ವಿದ್ವಾಂಸಕ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಬಾಂಗ್ಲಾ ಮಧ್ಯಂತರ ಸರ್ಕಾರ ಮಹತ್ವದ ನಿರ್ಣಯವನ್ನು ಕೈಗೊಂಡಿದೆ.
ಸಾಮಾನ್ಯವಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಧೀಶರಿಗೆ ಇರುವ ಮ್ಯಾಜಿಸ್ಟಿರಿಯಲ್ ಅಧಿಕಾರವನ್ನು ಬಾಂಗ್ಲಾ ಸರ್ಕಾರ ಎರಡು ತಿಂಗಳುಗಳ ಅವಧಿಗೆ ಸೈನ್ಯಕ್ಕೆ ನೀಡಿದೆ. ಆ ಮೂಲಕ ಕಾನೂನು ಸುವ್ಯವಸ್ಥೆಯನ್ನು ಬಿಗಿಗೊಳಿಸಲು ಕಠಿಣ ಕ್ರಮಕ್ಕೆ ಮುಂದಾಗಿದೆ.