ದೆಹಲಿ: ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. 14 ವರ್ಷದ ಬಾಲಕಿಯ ಮೇಲೆ ಆಕೆಯ ತಾಯಿಯ ಲಿವ್-ಇನ್ ಸಂಗಾತಿ ಅತ್ಯಾಚಾರವೆಸಗಿದ್ದಾನೆ.
ಆರೋಪಿ ಅಂಕಿತ್ ಯಾದವ್ (29) ವಿರುದ್ಧ ಬುರಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ ಗಾಜಿಯಾಬಾದ್ನ ಲೋನಿ ನಿವಾಸಿಯಾಗಿದ್ದು, ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಮಹಿಳೆಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ, ಆಕೆ ಎಂಟು ವರ್ಷಗಳ ಹಿಂದೆ ತನ್ನ ಪತಿಯನ್ನು ತೊರೆದಿದ್ದಳು. ನಂತರ ಬಸ್ ಚಾಲಕ ಯಾದವ್ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದಳು. ಜುಲೈ 23 ರಂದು ಮಹಿಳೆ ಆಸ್ಪತ್ರೆಯಲ್ಲಿದ್ದು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಹೋಗಿದ್ದಳು, ಅಂದು ಯಾದವ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಹಿಳೆ ಪೊಲೀಸರಿಗೆ ವಿಷಯ ತಿಳಿಸಿದ್ದು, ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.