ಬಾವಿಗೆ ಹಾರಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ 

ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ  ಮಾಡಿಕೊಂಡಿದ್ದಾಳೆ. ಈ ಘಟನೆ  ನಡೆದಿದೆ.

ದೀಕ್ಷಾ ನಾಯ್ಕ (22) ಮೃತ ದುರ್ದೈವಿ.

ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಎಂದಿನಂತೆ ಬೆಳಗ್ಗೆ ಕಾಲೇಜಿ ಹೋಗಿ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಗಳು ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿ, ಅನುಮಾನಗೊಂಡು ಬಾವಿಯಲ್ಲಿ ನೋಡಿದಾಗ ಮೃತದೇಹವು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Font Awesome Icons

Leave a Reply

Your email address will not be published. Required fields are marked *