ಬಿಜೆಪಿಯ ʼಮೊಟ್ಟೆʼ ವಿಡಿಯೋ ವಿರುದ್ಧ ಕಾಂಗ್ರೆಸ್‌ ಕಿಡಿ

ಬೆಂಗಳೂರು:  ಚುನಾವಣೆ ಎಲ್ಲೆಡೆ ರಂಗೇರಿದೆ. ಒಂದೆಡೆ ಹೇಳಿಕೆಗಳ ಮೂಲಕ ನಾಯಕರ ವಾಗ್ದಾಳಿ ಇನ್ನೊಂದೆಡೆ ಎದುರಾಳಿಗಳ ಕಾಮಿಡಿ ವಿಡಿಯೋ ಹರಿಬಿಡುವುದು ಹೀಗೆ ಪಕ್ಷಗಳ ನಡುವೆ ಬೇರೆ ಬೇರೆ ರೀತಿಯಲ್ಲಿ ವಾಗ್ಧಾಳಿ ನಡೆಯುತ್ತಲೇ ಇದೆ. ಕರ್ನಾಟದ 14 ಕ್ಷೇತ್ರಗಳಲ್ಲಿ ಮೇ 7ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

ಈ ಮಧ್ಯೆ ಬಿಜೆಪಿ (BJP) ಸೋಷಿಯಲ್‌ ಮೀಡಿಯಾದಲ್ಲಿ ಆಕ್ಷೇಪಾರ್ಹ ವಿಡಿಯೊ ಹಂಚಿಕೊಂಡಿದೆ ಎಂದು ಕಾಂಗ್ರೆಸ್‌ (Congress) ದೂರು ನೀಡಿದೆ. ಮೀಸಲಾತಿ ವಿಚಾರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಲ್ಲಿ ಭೀತಿ ಹುಟ್ಟಿಸುವಂತ ವಿಡಿಯೊ ಪೋಸ್ಟ್‌ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಮುಖ್ಯಸ್ಥ ಅಮಿತ್‌ ಮಾಳವಿಯಾ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದೂರು ಕಾಂಗ್ರೆಸ್‌ ದಾಖಲಿಸಿದೆ.

ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸಲ್ಲಿಸಿದ ದೂರಿನಲ್ಲಿ, ಕರ್ನಾಟಕ ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನಿಮೇಟೆಡ್ ಪಾತ್ರಗಳನ್ನು ಚಿತ್ರಿಸುವ ವಿಡಿಯೊ ಇರುವುದನ್ನು ಉಲ್ಲೇಖಿಸಲಾಗಿದೆ.

ಈವಿಡಿಯೋವನ್ನು ಅನುಮೋದಿಸಿದ್ದಕ್ಕಾಗಿ ಅವರು ರಾಜ್ಯ ಮಟ್ಟದ ಮಾಧ್ಯಮ ಮೇಲ್ವಿಚಾರಣಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮತ್ತು ಅದರ ಪ್ರಸಾರದ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ್ದಾರೆ. ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *