ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ನಿರ್ಧಾರ

ಬೆಳಗಾವಿ:  ಲೋಕಸಭೆ ಚುನಾವಣೆಗೆ ಎರಡು ತಿಂಗಳು ಬಾಕಿ ಉಳಿದಿದೆ. ಭಾರತೀಯ ಜನತಾ ಪಾರ್ಟಿ ಮೂರನೇ ಬಾರಿಗೆ ಕೂಡ ಅಧಿಕಾರದ ಗದ್ದುಗೆ ಏರಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಬಿಜೆಪಿ ನಾಯಕರು ದೇಶಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೋಮವಾರ (ಮಾ.04) ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.

ಈಗಾಗಲೆ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಅಪೇಕ್ಷೆ ಹೊಂದಿರುವ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಕಾರ್ನಾಟಕದ ಯಾವೊಬ್ಬ ಅಭ್ಯರ್ಥಿಯ ಹೆಸರು ಇಲ್ಲ. ಇದು ರಾಜ್ಯ ಬಿಜೆಪಿ ನಾಯಕರಿಗೆ ಅಚ್ಚರಿ ಉಂಟುಮಾಡಿದೆ.ಈ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೋಮವಾರ (ಮಾ.04) ರಂದು ಬೆಳಗಾವಿಗೆ  ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.

ಸೋಮವಾರ ರಾತ್ರಿ 8 ಗಂಟೆಗೆ ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ಗೆ ಆಗಮಿಸುವ ನಡ್ಡಾ, ಬೆಳಗಾವಿಯ ‌ಐಟಿಸಿ ವೆಲ್​ಕಮ್​​​​​ ಹೋಟೆಲ್​ನಲ್ಲಿ ರಾತ್ರಿ 9 ಗಂಟೆಗೆ ನಾಲ್ಕು (ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ) ಲೋಕಸಭಾ ಕ್ಷೇತ್ರಗಳ ಕೋರ್​ ಕಮಿಟಿ ಸದಸ್ಯರ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳು, ಸಂಸದರು, ಶಾಸಕರು, ಪ್ರಮುಖರು ಭಾಗಿಯಾಗಲಿದ್ದಾರೆ  ಬಳಿಕ ಮಾರ್ಚ್ 5ರಂದು ಬೆಳಗ್ಗೆ 11ಗಂಟೆಗೆ ಚಿಕ್ಕೋಡಿಯಲ್ಲಿ ನಡೆಯುವ ಭೂತಮಟ್ಟದ ಸಮಾವೇಶ ಮತ್ತು ಅದೇ ದಿನ ಸಂಜೆ 4.30ಕ್ಕೆ ಬೆಳಗಾವಿಯಲ್ಲಿ ನಡೆಯುವ ‌ಬುದ್ಧಿಜೀವಿಗಳ ಸಮಾವೇಶದಲ್ಲಿ ಭಾಗಿಯಾಗಿ, ಸಂಜೆ ಬೆಳಗಾವಿಯಿಂದ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಬಿಜೆಪಿ ಬೆಳಗಾವಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಮಾಹಿತಿ ನೀಡಿದರು.

ಚಿಕ್ಕೋಡಿಯಲ್ಲಿ ಕಾರ್ಯಕರ್ತರ ಸಮಾವೇಶ ಮಾಡುವ ಮೂಲಕ ಕಾರ್ಯಕರ್ತರಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬಲಿದ್ದಾರೆ. ಇನ್ನು ರಾಷ್ಟ್ರಾಧ್ಯಕ್ಷರ ಭೇಟಿ ವೇಳೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ನಡ್ಡಾ ಸುತ್ತ ಪರೇಡ್​ ಮಾಡಲಿದ್ದಾರೆ ಎಂದು ಮೂಲ ತಿಳಿಸಿದೆ.

Font Awesome Icons

Leave a Reply

Your email address will not be published. Required fields are marked *