ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 2,248 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ.
ಎಸ್ಸೆಸ್ಸೆಲ್ಸಿ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ನ. 25 ಕೊನೆಯ ದಿನವಾಗಿದೆ.
ಲಘು ಉದ್ಯಮ ವಿಕಾಸ ಸಹಾಯಕ – 1,686 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಲಘು ಉದ್ಯಮ ವಿಸ್ತಾರ ಅಧಿಕಾರಿ – 562 ಹುದ್ದೆ, ವಿದ್ಯಾರ್ಹತೆ: ಪದವಿ.
ಲಘು ಉದ್ಯಮ ವಿಕಾಸ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-40 ವರ್ಷದೊಳಗಿರಬೇಕು. ಲಘು ಉದ್ಯಮ ವಿಸ್ತಾರ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 21-45 ವರ್ಷದೊಳಗಿರಬೇಕು. ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ನ ನಿಯಮಕ್ಕೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ.
ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಲಘು ಉದ್ಯಮ ವಿಕಾಸ ಸಹಾಯಕ ಹುದ್ದೆಗೆ – 826 ರೂ., ಲಘು ಉದ್ಯಮ ವಿಸ್ತಾರ ಅಧಿಕಾರಿ ಹುದ್ದೆಗೆ – 944 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್ಲೈನ್ ಮೂಲಕ ಪಾವತಿಸಬೇಕು.
ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಲಘು ಉದ್ಯಮ ವಿಕಾಸ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 30,500 ರೂ. ಮತ್ತು ಲಘು ಉದ್ಯಮ ವಿಸ್ತಾರ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000 ರೂ. ಮಾಸಿಕ ವೇತನ ನಿಗಡಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://pay.bharatiyapashupalan.com/onlinerequirment) ಹೆಚ್ಚಿನ ವಿವರಗಳಿಗೆ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ನ ವೆಬ್ಸೈಟ್ ವಿಳಾಸ: bharatiyapashupalan.comಗೆ ಭೇಟಿ ನೀಡಿ. ಫೋನ್ ನಂಬರ್: 0141-2202271, 9351899199ಕ್ಕೆ ಕರೆ ಮಾಡಿ.