ಬೀದರ್: ಕಾಲುವೆಯಲ್ಲಿ ಕೊಚ್ಚಿಹೋದ ಸಹೋದರರು

ಭಾಲ್ಕಿ: ತಾಲ್ಲೂಕಿನ ಕಣಜಿ ಗ್ರಾಮದ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಶುಕ್ರವಾರ ಕಾಲು ಜಾರಿ ಬಿದ್ದು ಇಬ್ಬರು ಸಹೋದರರು ಮೃತಪಟ್ಟಿದ್ದಾರೆ. ಮೊಹಮ್ಮದ್ ಫಾರೂಕ್ (20), ಮೊಹಮ್ಮದ್ ಆತೀಫ್ (18) ಮೃತ ಸಹೋದರರು.

ಆತೀಫ್ ಕಾರಂಜಾ ಕಾಲುವೆಗೆ ನೀರು ತರಲು ಹೋದಾಗ ಕಾಲು ಜಾರಿ ಬಿದ್ದು, ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದಾಗ ಅಣ್ಣ ಫಾರೂಕ್ ನೆರವಿಗೆ ಮುಂದಾದರು.

ನೀರಿನ ರಭಸಕ್ಕೆ ಇಬ್ಬರೂ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ವಿಶ್ವಾರಾಧ್ಯ ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *