ಬೇರೊಬ್ಬರ ಜೀವ ಉಳಿಸಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡ ಕಾಲೇಜು ಉಪನ್ಯಾಸಕಿ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಉಡುಪಿ, ಸೆಪ್ಟಂಬರ್, 17,2024 (www.justkannada.in): ತನ್ನ ಪತಿಯ ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್‌ ನ(ಯಕೃತ್ತು) ಭಾಗವನ್ನು ದಾನ ಮಾಡಿ ಅವರ ಜೀವ ಉಳಿಸಿದ್ದ  ಉಪನ್ಯಾಸಕಿಯೊಬ್ಬರು ತಾವೇ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ಈ ಘಟನೆ ನಡೆದಿದೆ. ಅರ್ಚನಾ ಕಾಮತ್ (34) ಮೃತಪಟ್ಟವರು. ಅರ್ಚನಾ ಕಾಮತ್ ಅವರು ನಗರದ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು.

ಈ ನಡುವೆ ತನ್ನ ಪತಿಯ ಸಂಬಂಧಿ  69 ವರ್ಷ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ (Liver) ಕಸಿಗೆ ದಾನಿಯಾಗಲು ಬಯಸಿದ್ದ 34 ವರ್ಷದ ಅರ್ಚನಾ ಕಾಮತ್ ಅವರು ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ಅರ್ಚನಾ ಕಾಮತ್ ಅವರು  ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ.

ಚೇತನ್ ಕಾಮತ್ ಅವರ ಪತಿಯ ಸಂಬಂಧಿ ಮಹಿಳೆಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಲಿವರ್‌ ನ ಅಗತ್ಯವಿತ್ತು. ಹಲವರನ್ನು ತಪಾಸಣೆ ಮಾಡಿದ್ದರೂ ರಕ್ತದ ಗುಂಪು ಹೊಂದಾಣಿಕೆಯಾಗಿರಲಿಲ್ಲ. ಆದರೆ ಅರ್ಚನಾ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹೀಗಾಗಿ ಅರ್ಚನಾ ಅವರೇ ಲಿವರ್‌ ನ ಭಾಗದ ದಾನಕ್ಕೆ ಮುಂದೆ ಬಂದಿದ್ದಾರೆ.

ಅದರಂತೆ 12 ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಅರ್ಚನಾ ಅವರ ಲಿವರ್‌ ನ ಸ್ವಲ್ಪ ಅಂಶವನ್ನು ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತಚಿಕಿತ್ಸೆ ನಡೆದಿತ್ತು. ಆ ಬಳಿಕ ಅರ್ಚನಾ ಅವರು ಆರೋಗ್ಯದಿಂದ ಇದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಇದಾದ ಬಳಿಕ ಕೆಲ ದಿನಗಳ ನಂತರ ಅರ್ಚನಾ ಕಾಮತ್ ಅವರಿಗೆ ಜ್ವರ ಕಾಣಿಸಿಕೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಮೃತಪಟ್ಟದ್ದಾರೆ.

Key words:  college lecturer, death, Liver, donation, udupi

Font Awesome Icons

Leave a Reply

Your email address will not be published. Required fields are marked *