ಬ್ರೇಕ್ ಫೇಲ್ ಆಗಿ ಪಲ್ಟಿಯಾದ ರಾಜಹಂಸ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಳಗಾವಿ,ಏಪ್ರಿಲ್,16,2024 (www.justkannada.in): ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್​ ಆಗಿದ್ದು,  ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ. ಘಟನೆಯಲ್ಲಿ ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಪಲ್ಟಿಯಾದ ಕೂಡಲೇ ಸ್ಥಳಕ್ಕೆ ಸ್ಥಳೀಯರು ಆಗಮಿಸಿ  ಬಸ್​ ನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು  ಭೇಟಿ ನೀಡಿ  ಪರಿಶೀಲನೆ ನಡೆಸಿದ್ದಾರೆ.

Key words: Rajahansa bus, brake, failure, injured

Previous articleಏ.20 ರಂದು ರಾಜ್ಯಕ್ಕೆ ಮತ್ತೆ ಪ್ರಧಾನಿ ನರೇಂದ್ರ ಮೋದಿ.

Font Awesome Icons

Leave a Reply

Your email address will not be published. Required fields are marked *