ಚಿಕ್ಕಮಗಳೂರು: ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಇಲ್ಲಿನ ಲಕ್ಕವಳ್ಳಿಯ ಭದ್ರಾ ಜಲಾಶಯ ಈ ಮುಂಗಾರು ಹಂಗಾಮಿನ ದಾಖಲೆಯ ಪ್ರಮಾಣದ ಒಳಹರಿವು ದಾಖಲಿಸಿದೆ.
ಜಲಾಶಯಕ್ಕೆ ಗುರುವಾರ ಬೆಳಿಗ್ಗೆ 6 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 42,165 ಕ್ಯುಸೆಕ್ ಒಳಹರಿವು ದಾಖಲಾಗಿದೆ.