ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್​ನಲ್ಲಿ ‘ಆರ್​ಆರ್​ಆರ್’ಗೆ ವಿಶೇಷ ಗೌರವ

ಲಾಸ್ ಏಂಜಲೀಸ್: 96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಇಂದು (ಮಾರ್ಚ್​ 11) ಅಮೆರಿಕದ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​​ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ.

ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್​ಎಸ್​ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ. 2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

 

 

Font Awesome Icons

Leave a Reply

Your email address will not be published. Required fields are marked *