ಮಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎನ್ಐಟಿಕೆಯ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಮಿತಿಯಿಂದ ವರದಿ ತರಿಸಿ ಕ್ರಮ ಕೈಗೊಳ್ಳಲು ಕಳೆದೆರಡು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಏನೂ ಪ್ರಯೋಜನವಾಗಿಲ್ಲ ಎಂದು ಮಾಜಿ ಮೇಯರ್ ಶಶಿಧರ ಹೆಗ್ಡೆ ವಿಷಾದ ವ್ಯಕ್ತಪಡಿಸಿದರು.
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹಲವು ರಸ್ತೆಗಳಲ್ಲಿ ಅಗೆದು ಹಾಕಲಾಗಿದೆ. ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಡಿಸೆಂಬರ್ ಒಳಗೆ ರಸ್ತೆಗುಂಡಿಗಳಿಗೆ ಪ್ಯಾಚ್ವರ್ಕ್ ಕೆಲಸ ಮುಗಿಸಬೇಕು. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಸಭೆ ಕರೆಯಬೇಕು ಎಂದು ಅವರು ಆಗ್ರಹಿಸಿದರು.
ಮನಪಾದಲ್ಲಿ ಬಿಜೆಪಿ ಆಡಳಿತದಲ್ಲಿ ಜಲಸಿರಿ ಕಾಮಗಾರಿ, ಗೇಲ್ಗ್ಯಾಸ, ಸ್ಮಾರ್ಟ್ ಸಿಟಿ, ಪ್ರೀಮಿಯಂ ಎಫೇರ್ನ ಅವ್ಯವಸ್ಥಿತ ಕಾಮಗಾರಿಗಳಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ನುಡಿದರು. ಕಾಂಗ್ರೆಸ್ ಮುಖಂಡರಾದ ಶಬ್ಬೀರ್, ಹೇಮಂತ್ ಗರೋಡಿ, ಸಲೀಂ, ದುರ್ಗಾ ಪ್ರಸಾದ್, ಇಮ್ರಾನ್, ಹಬೀಬ್ ಕಣ್ಣೂರು ಉಪಸ್ಥಿತರಿದ್ದರ