ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ.  » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮಂಗಳೂರು,ಮೇ,4,2024 (www.justkannada.in): ಮಂಗಳೂರು ವಿಮಾನ ನಿಲ್ದಾಣದ ಕಚೇರಿಗೆ ಇ-ಮೇಲ್​ ಮೂಲಕ ಬಾಂಬ್​ ಬೆದರಿಕೆ ಸಂದೇಶ ಬಂದಿದ್ದು ಆತಂಕ ಎದುರಾಗಿದೆ.

ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

ಉಗ್ರರ ಹೆಸರಲ್ಲಿ ಇ-ಮೇಲ್ ಬಂದಿದ್ದು,  ವಿಮಾನ ನಿಲ್ದಾಣದ ಆವರಣದಲ್ಲಿ​​​ ಆವರಣದಲ್ಲಿ ಸ್ಫೋಟಕಗಳನ್ನ ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ” ಎಂದು ಬೆದರಿಕೆ ಮೇಲ್ ಬಂದಿದೆ.

ಏಪ್ರಿಲ್ 29ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಚೇರಿಗೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ಬಜ್ಪೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರತಿ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ಅನುಮಾನ ಬಂದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.  ಇತ್ತೀಚೆಗೆ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಇ ಮೇಲೆ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು.

Key words: Bomb threat –Mangalore- airport

Font Awesome Icons

Leave a Reply

Your email address will not be published. Required fields are marked *