ದಾರವಾಡ : ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳು ಗ್ರಾಮದಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸಿದರು. ಮಕ್ಕಳು ಬಮಿಗಟ್ಟಿ ಗ್ರಾಮದ ಪ್ರಮುಖ ಓಣಿಗಳಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸಿದರು.5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಲು ವಿವಿಧ ಘೋಷಣೆಗಳು ಮತ್ತು ಬಿತ್ತಿ ಪತ್ರಗಳ ಮುಖಾಂತರ ಗ್ರಾಮದಲ್ಲಿ ಜಾಗೃತಿ ಮೂಡಿಸಿದರು. ಶಾಲೆಯ ಮುಖ್ಯ ಶಿಕ್ಷಕ ಬಿ. ಬಿ ಕಿಚಡಿ ಹಾಗೂ ಇತರರು ಇದ್ದರು.