ಮತಚಲಾಯಿಸಿ ಮನೆಗೆ ತೆರಳುತ್ತಿದ್ದ ಪಾದಚಾರಿಗೆ‌ ಬೈಕ್ ಡಿಕ್ಕಿ; ಸ್ಥಳದಲ್ಲಿಯೇ ಸಾವು

ನಂಜನಗೂಡು: ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪಾದಚಾರಿ ಮತ್ತು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ 40 ವರ್ಷದ ಶಿವಣ್ಣ, ಮತ್ತು 19 ವರ್ಷದ ಮಿಥುನ್ ಮೃತ ದುರ್ಧೈವಿಗಳು. ಬೈಕ್ ಸವಾರ ತನ್ನ ಸ್ನೇಹಿತನೊಂದಿಗೆ ಚಾಮರಾಜನಗರ ತಾಲ್ಲೂಕಿನ ಗಾಳಿಪುರ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತಾಂಡವಪುರ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿ ಶಿವಣ್ಣ ಮತ್ತು ಬೈಕ್ ಸವಾರ ಮಿಥುನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರ ಅನಿಲ್ ಪಟೇಲ್ ಗೆ ಗಂಭೀರ ಗಾಯಗಳಾಗಿವೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟಿರುವ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *