ಮತ ಚಲಾಯಿಸಿ ಗಮನ ಸೆಳೆದ ವಿಶ್ವದ ಕುಬ್ಜ ಮಹಿಳೆ ಜ್ಯೋತಿ

ಮಹಾರಾಷ್ಟ್ರ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಆರಂಭಗೊಂಡಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ ಮತ ಚಲಾಯಿಸಿದರು. ಜ್ಯೋತಿ ಅವರು 30ವರ್ಷದವರಾಗಿದ್ದು, 62.8 ಸೆಂ.ಮೀ ಎತ್ತರ ಇದ್ದಾರೆ. ನಾಗ್ಪುರ್ ದ ನಿವಾಸಿಯಾದ ಜ್ಯೋತಿ ಆಮ್ಗೆ ತಮ್ಮ ಪೋಷಕರ ಜೊತೆಗೆ ಮತಗಟ್ಟೆಗೆ ಆಗಮಿಸಿದರು.

ಈ ವೇಳೆ ಅಲ್ಲಿ ಸೇರಿದ್ದ ಜನರು ಅವರನ್ನು ಸಂತೋಷದಿಂದ ಸ್ವಾಗತಿಸಿದರು. ಅಧಿಕಾರಿಗಳು ಕೂಡ ಜವಾಬ್ದಾರಿ ಮೆರೆದ ಜ್ಯೋತಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2011ರಲ್ಲಿ ಜ್ಯೋತಿ ಅವರನ್ನು ವಿಶ್ವದ ಕುಬ್ಜ ಮಹಿಳೆ ಎಂಬುದಾಗಿ ಗಿನ್ನಿಸ್ ಸಂಸ್ಥೆ ಪ್ರಕಟಿಸಿತು.

ನಾನು ಇಂದು ನನ್ನ ಇಡೀ ಕುಟುಂಬದೊಂದಿಗೆ ಬಂದು ಮತ ಹಾಕಿದ್ದೇನೆ. ಪ್ರತಿಯೊಬ್ಬ ಮತದಾರರು ತಮ್ಮ ಮತವನ್ನು ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ ಏಕೆಂದರೆ ಅದು ನಮ್ಮ ಕರ್ತವ್ಯವಾಗಿದೆ ಎಂದರು.

ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಮತ್ತು ಉತ್ತರ ಪ್ರದೇಶದಲ್ಲಿ ಮತದಾನ ನಡೆಯುತ್ತಿದೆ.

Font Awesome Icons

Leave a Reply

Your email address will not be published. Required fields are marked *