ನನ್ನ ಹೆಸರಿನಲ್ಲಿ ರಾಮ ಇದ್ದಾನೆ, ನಾನೂ ಹಿಂದು ಎಂದು ಹೇಳಿಕೊಳ್ಳುವ ಯಾವ ನೈತಿಕತೆಯೂ ಇಲ್ಲ ಎಂದು ವಾಗ್ದಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಹನುಮ ಧ್ವಜವನ್ನು ನಿಷೇಧಿಸಿದೆಯೇ? ನಿಷೇಧ ಮಾಡದಿದ್ದರೆ, ಅನುಮತಿ ಪಡೆದು ಧ್ವಜ ಸ್ಥಂಭಕೆ ಕಟ್ಟಿದ ಹನುಮಧ್ವಜವನ್ನು ಕಿತ್ತು ಹಾಕಿದ್ದು ಯಾಕೆ? ಅಧಿಕಾರಿಗಳ ಉದ್ಧಟತನವಾದರೆ ಕೂಡಲೇ ಅವರನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಿ. ಆಳುವವರ ಮರ್ಜಿಗೆ ಅನುಗುಣವಾಗಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದರೆ ಎಂದು ಕಿಡಿಕಾರಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಅಯೋಧ್ಯೆಯ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಹಾರಿಸಲಾಗಿದ್ದ ಹನುಮ ಧ್ವಜ ಇಳಿಸಿದ ಕಾಂಗ್ರೆಸ್ ಸರ್ಕಾರ ಎಂದು ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.