ಬೆಂಗಳೂರು,ಡಿಸೆಂಬರ್,21,2023(www.justkannada.in): ರಾಜ್ಯದಲ್ಲಿ ಕೋವಿಡ್ ಆತಂಕ ಹಿನ್ನೆಲೆ ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಕೇರಳದಲ್ಲಿ ಪರೀಕ್ಷೆ ಹೆಚ್ಚು. ಆದ್ದರಿಂದ ಕೋವಿಡ್ ಪ್ರಮಾಣ ಕೂಡ ಹೆಚ್ಚಿದೆ. ಇಲ್ಲಿ ಪರೀಕ್ಷೆಗಳು ಹೆಚ್ಚಾದಂತೆ ಪತ್ತೆ ಪ್ರಮಾಣವೂ ಹೆಚ್ಚಾಗಿದೆ. ಮಾಧ್ಯಮದವರು, ಚಾನಲ್ ನವರು ಅನಗತ್ಯ ಪ್ಯಾನಿಕ್ ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ. ಪ್ಯಾನಿಕ್ ಸೃಷ್ಟಿಸಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದರು.
ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎನ್ನುವ ಸ್ಪಷ್ಟ ಸೂಚನೆ ನೀಡಿದ್ದೇನೆ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು ಈಗಿನ ಉಪತಳಿ JN.1 (ಒಮಿಕ್ರಾನ್ ಯಪತಳಿ) ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ICU ನಲ್ಲಿದ್ದಾರೆ. ಆದರೆ ಇವರಿಗೆ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ ಎಂದರು.
ದಿನ 5000 ಟೆಸ್ಟ್ ಗಳು ನಡೆಯುತ್ತವೆ. ಬೆಂಗಳೂರಲ್ಲಿ ಸಾವಿರ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಇವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಬೇಕು. ತಾಂತ್ರಿಕ ಸಲಹಾ ಸಮಿತಿ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡಬೇಕು.
ಇನ್ನು ಪರಿಸ್ಥಿತಿಯನ್ನು over play ಮಾಡಬೇಡಿ ಎಂದು ಮಾಧ್ಯಮದವರಿಗೆ ತಿಳಿ ಹೇಳಿದ ಸಿಎಂ ಸಿದ್ದರಾಮಯ್ಯ, ಡೆಡಿಕೇಟೆಡ್ ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಇರುತ್ತವೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು. ಲಸಿಕೆಗಳನ್ನು ಸಿದ್ದವಿಟ್ಟುಕೊಳ್ಳಲು ಸೂಚಿಸಲಾಗಿದೆ. ಸಾಕಷ್ಟು ಹಣ ಇದೆ. ಕೋವಿಡ್ ನಿರ್ವಹಣೆಗೆ ಹಣಕಾಸಿಗೆ ಕೊರತೆ ಇಲ್ಲ. ಪರಿಸ್ಥಿತಿ ನೋಡಿಕೊಂಡು ಡೆಡಿಕೇಟೆಡ್ ಆಸ್ಪತ್ರೆಗಳನ್ನು ನಿಗದಿ ಮಾಡುತ್ತೇವೆ ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದರು.
Key words: covid-19- Media- channels -not -create panic- CM –Siddaramaiah
The post ಮಾಧ್ಯಮದವರು, ಚಾನಲ್ ನವರು ಪ್ಯಾನಿಕ್ ಸೃಷ್ಟಿಸಬೇಡಿ- ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ. appeared first on Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.