ಮಾಲೀಕ ಅರೆಸ್ಟ್ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಚೆನ್ನೈ: ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನಡೆದಿದೆ.

ರಾಟ್‌ವೀಲರ್ ದಾಳಿಗೊಳಗಾದ ಸುದಕ್ಷ ಎಂಬ ಐದು ವರ್ಷದ ಬಾಲಕಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ನಾಯಿಗಳ ಮಾಲೀಕ ಅವುಗಳನ್ನು ಲೂಸ್ ಬಿಟ್ಟ ಪರಿಣಾಮ ನಾಯಿಗಳು ಬಾಲಕಿಯ ಮೇಲೆರಗಿದೆ. ದಾಳಿ ನಡೆದ ತಕ್ಷಣ ಬಾಲಕಿಯ ತಾಯಿ ಆಕೆಯನ್ನು ರಕ್ಷಿಸಲು ಧಾವಿಸಿದ್ದಾರೆ.

ನಾವು ಮಾಲೀಕರನ್ನು ಬಂಧಿಸಿದ್ದೇವೆ ಮತ್ತು ನಾಯಿಗಳನ್ನು ನೋಡಿಕೊಳ್ಳುವ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶೇಖರ್ ದೇಶಮುಖ್ ತಿಳಿಸಿದ್ದಾರೆ.

ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಯಿಗಳ ಮಾಲೀಕರನ್ನು ಬಂಧಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *