ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಸಿದ್ದಾರೆ; ರಾಗಾ ಕಿಡಿ

ಶಿವಮೊಗ್ಗ: ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, 400 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ಮೋದಿ ಅವರು ಮತಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಗುಡುಗಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಪ್ರಕರಣ ಬಿಜೆಪಿಯವರಿಗೆ ಮೊದಲೇ ಗೊತ್ತಿತ್ತು. ಆದರೂ ಪ್ರಧಾನಿ ಮೋದಿ ಹಾಗೂ ಆ ಪಕ್ಷದ ಮುಖಂಡರು ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಮಹಿಳೆಯರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *