ಕಾರವಾರ: ಎರಡು ವರ್ಷಗಳಿಗೊಮ್ಮೆ ನಡೆಯುವ ಪುರಾಣ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ದೇಗುಲದ ಆವರಣದಲ್ಲಿ ನಡೆದ ಸಭೆಯ ನಂತರ ದಿನಾಂಕ ಪ್ರಕಟಿಸಲಾಗಿದೆ.
ಮಾರಿಕಾಂಬಾ ದೇವಿ ಜಾತ್ರೆಯು ಮಾರ್ಚ್ 19 ರಿಂದ ಆರಂಭವಾಗಲಿದ್ದು, ಮಾರ್ಚ್ 27ರ ವರೆಗೆ ನಡೆಯಲಿದೆ.
ಒಟ್ಟು ಎಂಟು ದಿನಗಳ ಕಾಲ ಲಕ್ಷಾಂತರ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರಲಿದ್ದು, ಇದೇ ವೇಳೆ ಹರಕೆ ಸೇವೆ ಸಲ್ಲಿಸಲಾಗುತ್ತದೆ.
ಮಾರ್ಚ್ 19 ರಂದು ದೇವಿಯ ರಥದ ಕಲಶ ಪ್ರತಿಷ್ಠೆ, ಕಲ್ಯಾಣ ಪ್ರತಿಷ್ಠೆ ನಡೆಯಲಿದೆ. ಮಾರ್ಚ್ 20 ರಂದು ಮಾರಿಕಾಂಬಾ ದೇವಿಯ ಅದ್ದೂರಿ ರಥೋತ್ಸವ ನಡೆಯಲಿದೆ. ಮಾರ್ಚ್ 21 ರಂದು ಜಾತ್ರಾ ಗದ್ದುಗೆಯಲ್ಲಿ ದೇವಿಯ ಪ್ರತಿಷ್ಠಾಪನೆಯಾಗಲಿದ್ದು, ಸೇವೆಗೆ ಅವಕಾಶ ಮಾಡಿಕೊಡಲಾಗುತ್ತದೆ.
ಮಾರ್ಚ್ 27 ರಂದು ಜಾತ್ರಾ ವಿಧಿ ವಿಧಾನಗಳು ಮುಕ್ತಯಗೊಳ್ಳಲಿದೆ.