ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್

ನವದೆಹಲಿ: ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಬಿಜೆಪಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಹೀಗಾಗಿ ಸಾರ್ವಜನಿಕ ನ್ಯಾಯಾಲಯದ ಮೊರೆ ಹೋಗುತ್ತೇವೆ.ಅವರ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ನವೆಂಬರ್‌ನಲ್ಲಿ ದೆಹಲಿ ಚುನಾವಣೆ ನಡೆಸುವಂತೆ ಎಎಪಿ ಸಂಚಾಲಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ಕೇಜ್ರಿವಾಲ್, ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದ ನಂತರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಜನರು ನಿರ್ಧರಿಸುವವರೆಗೂ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇಂದಿನಿಂದ ಎರಡು ದಿನಗಳ ನಂತರ ನಾನು ರಾಜೀನಾಮೆ ನೀಡಲಿದ್ದೇನೆ, ಕೇಜ್ರಿವಾಲ್ ಪ್ರಾಮಾಣಿಕ ಎಂದು ಸಾರ್ವಜನಿಕರು ತೀರ್ಪು ನೀಡುವವರೆಗೂ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದರು. ನಾನು ರಾಜೀನಾಮೆ ನೀಡಿದ ನಂತರ ದೆಹಲಿ ವಿಧಾನಸಭೆಯನ್ನು ವಿಸರ್ಜಿಸುವುದಿಲ್ಲ ಎಂದು ಅವರು ಹೇಳಿದರು.

ಆಮ್ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು. ಈ ಸಂದರ್ಭದಲ್ಲಿ, ಈ ಅವಧಿಯಲ್ಲಿ ಮನೀಶ್ ಸಿಸೋಡಿಯಾ ಅವರು ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದರು. ಈ ವೇಳೆ ಅರವಿಂದ್ ಕೇಜ್ರಿವಾಲ್ ಅವರು ಮಹಾರಾಷ್ಟ್ರ ಮತ್ತು ಜಾರ್ಖಂಡ್ ಜೊತೆಗೆ ದೆಹಲಿಯಲ್ಲಿ ಚುನಾವಣೆ ನಡೆಸಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು. ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಚುನಾವಣಾ ಆಯೋಗವು ಇನ್ನೂ ಚುನಾವಣಾ ದಿನಾಂಕಗಳನ್ನು ಘೋಷಿಸಿಲ್ಲ, ಆದರೆ ಹರಿಯಾಣವನ್ನು ಈಗಾಗಲೇ ಘೋಷಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *