ಮುರಘಾ ಮಠದ ಶಿವಮೂರ್ತಿ ಶರಣರಿಗೆ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಚಿತ್ರದುರ್ಗ ಮುರಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಅರೋಪಗಳಿಗೆ ಸಂಬಂಧಿಸಿದಂತೆ ಮಂಜೂರಾಗಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ರದ್ಧು ಪಡಿಸಿದೆ.

ಡಿ.ರಾಜಪ್ಪ ಎಂಬುವವರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ವಿಕ್ರಮ್‌ ನಾಥ್‌ ನೇತೃತ್ವದ ದ್ವಿಸದಸ್ಯ ಪೀಠವು,ʻವಿಚಾರಣಾ ನ್ಯಾಯಾಲಯದ ಎದುರು ಒಂದು ವಾರದೊಳಗೆ ಹಾಜರಾಗುವಂತೆ ಸೂಚಿಸಿದೆ. ಜೊತೆಗೆ ನಾಲ್ಕು ತಿಂಗಳ ಒಳಾಗಾಗಿ ವಿಚಾರಣೆ ಪೋರ್ಣಗೊಳಿಸುವಂತೆಯೂ ಚಿತ್ತರದುರ್ಗ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೂ ಶಿವಮೂರ್ತಿನ ಶರಣರು ನ್ಯಾಯಂಗಾ ಬಂಧನದಲ್ಲಿರಬೇಕು. ಪ್ರಾಸಿಕ್ಯೂಷನ್‌ ಮತ್ತು ಆರೋಪಿ ಎಲ್ಲರೂ ವಿಚಾರಣೆಗೆ ಸಹಕರಿಸಬೇಕು. ವಿಚಾರಣೆಗೆ ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಿದ್ದಲ್ಲಿ,ಅದನ್ನು ಸುಪ್ರೀಂ ಕೋರ್ಟ್‌ ಗಮನಕ್ಕೆ ತರಬೇಕುʼ ಎಂದು ಪೀಠ ನಿರ್ದೇಶಿಸಿದೆ.

Font Awesome Icons

Leave a Reply

Your email address will not be published. Required fields are marked *