ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ಮುಂದುವರೆಯಲಿದೆ- ಸಿಎಂ ಸಿದ್ದರಾಮಯ್ಯ. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೀದರ್, ಏಪ್ರಿಲ್ ,25,2024 (www.justkannada.in):  ಕಾಂಗ್ರೆಸ್ ಪಕ್ಷ ಎಸ್ ಸಿ,  ಒಬಿಸಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ಹಂಚಿಕೆ ಮಾಡಿದೆ ಎಂದು ಆರೋಪಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ,  ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲಾತಿ 1994 ರಿಂದ ಜಾರಿಗೆ ಬಂದಿತ್ತು. ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ಮುಂದುವರೆಯಲಿದೆ ಎಂದಿದ್ದಾರೆ.

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಈ ಮೀಸಲಾತಿಯನ್ನು ಹಿಂಪಡೆದಿದ್ದಕ್ಕೆ ಈ ವರ್ಗ ಸುಪ್ರಿಂ ಕೋರ್ಟ್ ಮೊರೆ ಹೋಗಿತ್ತು. ಆ ವೇಳೆ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನ ಮುಂದೆ 4%ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದು, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದರು.

Key words: 4% reservation,, Muslim community, CM Siddaramaiah

Previous articleರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ.

Font Awesome Icons

Leave a Reply

Your email address will not be published. Required fields are marked *